ಕಾಂಗ್ರೆಸ್ ನಲ್ಲಿ ಡಿಕೆಶಿ ಅವರಿಗೆ ಬಲ ಹೆಚ್ಚಿದೆ ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಬೆಂಗಳೂರಿನ ಹಲವು ಕ್ಷೇತ್ರಗಳ ಮುಖಂಡರು ಮತ್ತು ಬಳ್ಳಾರಿ ಸ್ಥಳೀಯ ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಉಪ ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಗೆ ಮನವಿ ಮಾಡಿದ್ದಾರೆ.
ಆದರೆ, ಕೆಪಿಸಿಸಿಯಿಂದ ಡಿಕೆಶಿಗೆ ಯಾವುದೇ ಜವಾಬ್ದಾರಿ ನೀಡಿಲ್ಲ. ಡಿ.ಕೆ. ಶಿವಕುಮಾರ್ ಉಪ ಚುನಾವಣೆ ಜವಾಬ್ದಾರಿ ತೆಗೆದುಕೊಂಡರೆ ನಾವು ಉಪ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಚಾರ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರಲ್ಲಿ ಇದ್ದು, ಕೆಪಿಸಿಸಿ ವತಿಯಿಂದ ಡಿಕೆಶಿಗೆ ಜವಾಬ್ದಾರಿ ನೀಡುವ ಮೊದಲೇ ಅವರ ಮೇಲೆ ಒತ್ತಡ ಹೇರತೊಡಗಿದ್ದಾರೆ.