ಸಿಎಂ ಕುಮಾರಸ್ವಾಮಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕರೆ ಮಾಡಿ ಫುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಅಭ್ಯವಾಗಿದೆ.
ಕುಮಾರಸ್ವಾಮಿಯವರೇ ಸುಮಲತಾ ಹಾಗೂ ಮಂಡ್ಯ ಕಾಂಗ್ರೆಸ್ ನಾಯಕರ ಸಭೆಯ ವಿಡಿಯೋ ಲೀಕ್ ಮಾಡಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಸಂಭಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ಮೇಲೆ ಫುಲ್ ಗರಂ ಆಗಿದ್ದಾರೆ.
ಇದರ ಜೊತೆಗೆ ಸುಮಲತಾ ಸಭೆಯ ಬಗ್ಗೆಯೂ ಮಾತನಾಡಿರುವ ಮುಖ್ಯಮಂತ್ರಿಗಳು ತೆರೆಮರೆಯಲ್ಲಿ ಇದುವರೆಗೆ ಆಟ ಆಡಿದ್ದವರೆಲ್ಲಾ ಇದೀಗ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ ಈಗ ನೀವೇನು ಮಾಡುತ್ತೀರಾ ಯಾವ ರೀತಿಯ ಕ್ರಮ ಕೈಗೊಳ್ಳುತ್ತೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇನ್ನೂ ಚುನಾವಣಾ ಫಲಿತಾಂಶ ಬಂದಿಲ್ಲ ಆದರೆ ಮೈತ್ರಿ ಧರ್ಮ ಪಾಲಿಸದ ಕಾಂಗ್ರೆಸ್ ನಾಯಕರು ಮಂಡ್ಯದಲ್ಲಿ ಏನೇನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ, ಯಾರು ಏನೆಲ್ಲಾ ಆಟ ಆಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಇಷ್ಟೆಲ್ಲಾ ಆದರೂ ಮೈತ್ರಿ ಮುರಿದವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ನೇರವಾಗಿಯೇ ಕೆಪಿಸಿಸಿ ಅಧ್ಯಕ್ಷರನ್ನು ಬೆಂಡೆತ್ತಿದ್ದಾರೆ ಎನ್ನಲಾಗುತ್ತಿದೆ.