ಬೆಂಗಳೂರು: ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಬೆನ್ನಲ್ಲೆ ಕಾಂಗ್ರೆಸ್ ವಿರುದ್ದ ಕಿಡಿ ಕಾರಿದ್ದಾರೆ. ಹೌದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಕಲೆಕ್ಷನ್ ಹೋಗುತ್ತಿದೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.
ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.