ಕಾಂಗ್ರೆಸ್ ನೋಡಿದ ಬಂಪರ್ ಆಫರ್ ತಿರಸ್ಕರಿಸಿದ ಮಾಜಿ ಪ್ರಧಾನಿ..! ಕಾಂಗ್ರೆಸ್ ಮೇಲಿನ ಅಸಮಧಾನ ಇದಕ್ಕೆ ಕಾರಣಾನಾ..?

Date:

ಮಾಜಿ ಪ್ರಧಾನಿ ಕಾಂಗ್ರೆಸ್ ನ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರನ್ನು ಪಂಜಾಬ್‌ನ ಅಮೃತಸರದಿಂದ ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಆದರೆ ಈ ಬಗ್ಗೆ ಖುದ್ದು ಮನಮೋಹನ್ ಸಿಂಗ್ ಅವರು ಇದಕ್ಕೆ ಒಪ್ಪದೇ ಇರುವುದು ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಸಿಖ್ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಮನಮೋಹನ್ ಸಿಂಗ್ ಅವರು ಇವತ್ತಿನವರೆಗೂ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಬೇರೆ ಬೇರೆ ರಾಜ್ಯಗಳ ಮೂಲಕ ರಾಜ್ಯಸಭೆಗೆ ಸತತವಾಗಿ ಆಯ್ಕೆಯಾಗುತ್ತಿದ್ದಾರೆ.

ಆದರೆ ಇದೇ ಮೊದಲ ಬಾರಿಗೆ ಸಿಖ್ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮನಮೋಹನ್ ಸಿಂಗ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಅಲ್ಲದೇ ಇದೇ ವಿಷಯವಾಗಿ ಅವರಿಗೆ ಮನವಿಯನ್ನೂ ಮಾಡಿದೆ ಎನ್ನಲಾಗಿದೆ. ಆದರೆ ಇದುವರೆಗೂ ಯಾವ ಚುನಾವಣೆಗೂ ಸ್ಪರ್ಧಿಸದ ಮನಮೋಹನ್ ಸಿಂಗ್ ಅವರು ಇದರ ಬಗ್ಗೆ ಯಾವುದೇ ಆಸಕ್ತಿಯನ್ನೂ ತೋರಿಲ್ಲ, ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸದ ಬಗ್ಗೆ ಸ್ಪಷ್ಟ ಕಾರಣವನ್ನೂ ಕೂಡ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದ್ದು ಇದಕ್ಕೆ ಸೋಲಿನ ಆತಂಕವೂ ಕಾರಣ ಇರಬಹುದು ಅಥವಾ ವಯಸ್ಸಿನ ಮಿತಿಯೂ ಇರಬಹುದು ಎಂದು ಹೇಳಲಾಗುತ್ತಿದೆ.

ಆದರೂ ಸಹ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮನಮೋಹನ್‌ಸಿಂಗ್ ಮನವೊಲಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಈ ರಿತಿಯ ಆಫರ್ ನೀಡುತ್ತಿರುವುದು ಇದೇ ಮೊದಲ ಬಾರಿಯಲ್ಲ 2009ರ ಚುನಾವಣೆಯಲ್ಲೂ ಕೂಡ ಮನಮೋಹನ್‌ಸಿಂಗ್ ಅವರಿಗೆ ಆಫರ್ ನೀಡಲಾಗಿತ್ತು. ಆಗ ಅನಾರೋಗ್ಯದ ಕಾರಣವನ್ನು ಹೇಳಿ ಸ್ಪರ್ಧೆ ನಿರಾಕರಿಸಿದ್ದರು. ಮನಮೋಹನ್‌ಸಿಂಗ್ ಅವರು 1991ರಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಾ ಬಂದಿದ್ದಾರೆ. ಆದರೆ ಇಲ್ಲಿಯವರೆಗೂ ಲೋಕಸಭಾ ಚುನಾವಣೆಯನ್ನು ಗೆದ್ದಿಲ್ಲ.

ಒಟ್ಟಾರೆ ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕ ಈಗಾಗಲೆ ಪ್ರಕಟವಾಗಿದ್ದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಾರಾ ಇಲ್ಲವ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...