ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು: ಸಿ.ಟಿ.ರವಿ
ಬೆಂಗಳೂರು: ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ.
ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು. ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ. ಕಣ್ಣಿಗೆ ಕಾಣುತ್ತದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನ ಬಹುತೇಕ ಶಾಸಕರಿಗೆ ಒಳ ಸಂಕಟವಿದೆ. ಕೆಲವರು ಬಾಯಿ ಬಿಟ್ಟು ಹೇಳುತ್ತಾರೆ; ಕೆಲವರು ಹೇಳುವುದಿಲ್ಲ. ಇದು ಒಳ ಸಂಕಟ. ಆಡಳಿತ ಪಕ್ಷದ ಶಾಸಕರದ್ದೇ ಈ ಪರಿಪಾಠ. ವಿಪಕ್ಷ ಶಾಸಕರ ಗೋಳು ಏನಾಗಬೇಡ. ಆದರೆ ಅವರ ಗೋಳು ಹೇಳಿಕೊಂಡರೆ ಪ್ರಯೋಜನವಿಲ್ಲ ಎಂದು ಟೀಕಿಸಿದರು.