No menu items!
6.5 C
Munich
Saturday, May 16, 2026

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

Must read

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಸಮೀಪ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲಿಗೆ ರಾಡ್‌ನಿಂದ ಹಲ್ಲೆ ನಡೆಸಿದ ಅವರು, ಬಳಿಕ ಚಾಕುವಿನಿಂದ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕರನ್ನು ತಕ್ಷಣ ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗೆ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಸ್ಥಳೀಯ ಹಾಗೂ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

- Advertisement -spot_img

More articles

- Advertisement -spot_img

Latest article