ತುಮಕೂರು: ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ,
ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದ. ಈ ವೇಳೆ ಪ್ರತಿಭಟನಾ ನಿರತರಾಗಿದ್ದ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರು.
ಈ ಹಿನ್ನಲೆ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ FIR
Date: