ಕಾಂಗ್ರೆಸ್ ಮುಖಂಡರಿಂದ ಶ್ರೀರಾಮುಲುಗೆ ಶಾಕ್ !? ಯಾಕೆ ಗೊತ್ತಾ ?

Must read

ಬಿಜೆಪಿ ಶಾಸಕ ಶ್ರೀರಾಮುಲು ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್​​ ಮುಖಂಡರು ಧಾರವಾಡ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರಿಗೆ ದೂರು ಸಲ್ಲಿಸಿದ್ದಾರೆ.

ದೂರು ನೀಡಲು ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್​​ ಮುಖಂಡರು ಚುನಾವಣಾ ಕಚೇರಿಗೆ ಆಗಮಿಸಿ ದೂರು ದಾಖಲಿಸಿದ್ದು, ಶಿವಳ್ಳಿ ನಿಧನಕ್ಕೆ ಮೈತ್ರಿ ಸರ್ಕಾರವೇ ಕಾರಣ ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರಜಾಪ್ರತಿನಿಧಿ ಕಾಯಿದೆ ಹಾಗೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಕೈ ಮುಖಂಡರು ದೂರು ದಾಖಲಿಸಿದ್ದಾರೆ.

ಶ್ರೀರಾಮುಲು ಮತದಾರರ ಮೇಲೆ ದುಷ್ಪರಿಣಾಮ ಬೀರುವ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದಾರೆ. ದೂರು ದಾಖಲು ಮಾಡಿ ಬಳಿಕ ಚುನಾವಣಾ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡೋಣ ಎಂದು ಸಂಸದ ವಿ.ಎಸ್ ಉಗ್ರಪ್ಪ  ಅವರು ಪ್ರತಿಕ್ರಿಯಿಸಿದ್ದರು.

- Advertisement -spot_img

More articles

- Advertisement -spot_img

Latest article