ಮಂಡ್ಯ: ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಕ ರವಿ ಆರೋಪ ಮಾಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೆಡವಲು ಸಂತೋಷ್ ಜೀ, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಮುಂದಾಗಿದ್ದಾರೆ. ಈಗಾಗಲೇ ಕಾಂಗ್ರೆಸ್‌ನ ಶಾಸಕರನ್ನು ಸಂಪರ್ಕ ಮಾಡಿ 100 ಕೋಟಿ ರೂ. ಆಫರ್ ಮಾಡಲಾಗಿದೆ ಎಂದು ಆರೋಪಿಸಿದರು.
ಇನ್ನೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಸಿಎಂ ಸ್ಟ್ರಾಂಗ್ ಇದ್ದಾರೆ, ಅವರ ಪರ ನಾವೆಲ್ಲರೂ ಇದ್ದೇವೆ. ರಾಜ್ಯಪಾಲರ ನಡೆ ವಿರುದ್ಧ 136 ಶಾಸಕರು ಒಗ್ಗಟ್ಟಾಗಿ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳನ್ನು ಸಿಲುಕಿಸಲು ಆಟವಾಡುತ್ತಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯಲ್ಲೇ ಒಡಕು ಉಂಟಾಗಿದೆ. ಬಿಎಸ್ವೈ, ವಿಜಯೇಂದ್ರ, ಯತ್ನಾಳ್, ಹೆಚ್ಡಿಕೆ ನಡುವೆ ಕಿತ್ತಾಟವಿದೆ ಎಂದು ತಿಳಿಸಿದರು.