ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ: ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ.
ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್ ಗಾಂಧಿ, ಕೇಜ್ರಿವಾಲ್ ಬಗ್ಗೆ ಪೋಸ್ಟ್ ಮಾಡಿದ್ದಾರೆಂಬ ಕಾರಣಕ್ಕೆ ಮತಾಂಧ ಮುಸ್ಲಿಮರು ಫೆ.10ರ ಸಂಜೆ 6-7 ಗಂಟೆ ಸಮಯದಲ್ಲಿ ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ.
ಹಿಂದೂ ಸಮುದಾಯದ ಜನರಿಗೆ ಬೆದರಿಕೆ ಹಾಕಿದ್ದು, ಇಡೀ ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.