ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ಮಾಡುತ್ತಿದೆ. ಇದೀಗ ಇಡಿ ಅಧಿಕಾರಿಗಳೂ ದಾಳಿ ಮಾಡಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಸ್‌ಟಿ ನಿಗಮದ ಹಣ ಬೇರೆಡೆ ವರ್ಗಾವಣೆ ಮಾಡಿ ಅಕ್ರಮ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರ್ಬಳಕೆ ಆಗಿದ್ದು ಪತ್ತೆಯಾಗಿದೆ. ಇದರಿಂದಾಗಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಹಿರಂಗವಾಗಿದೆ ಎಮದು ಹೇಳಿದರು.
ಇನ್ನೂ ದದ್ದಲ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರಕ್ಕೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡ್ತವೆಂದು ಕಾಂಗ್ರೆಸ್ ಹೇಳಿತ್ತು. ಭ್ರಷ್ಟಾಚಾರ ರಹಿತ ಆಡಳಿತ ನೀಡ್ತವೆಂದು ಭರವಸೆ ನೀಡಿತ್ತು. ಆದ್ರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣದಿಂದ ಈಗ ಕಾಂಗ್ರೆಸ್ ಸರ್ಕಾರದ ಮುಖ ಕಳಚಿಬಿದ್ದಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಹಿರಂಗವಾಗಿದೆ: ಬಿ.ವೈ.ವಿಜಯೇಂದ್ರ
Date: