ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಮತ್ತೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷವು ಯಾವಾಗಲೂ ದುರಾಡಳಿತವನ್ನು ನಡೆಸುತ್ತಲೇ ಬರುತ್ತಿದೆ. ಅದಲ್ಲದೆ ನೂರಾರು ವರ್ಷಗಳ ಕಾಲ ನಮ್ಮ ದೇಶವನ್ನು ಆಡಳಿತ ನಡೆಸಿದ ಬ್ರಿಟಿಷರು ಕಾಂಗ್ರೆಸ್ ಪಕ್ಷಕ್ಕೆ ‘ಒಡಕನ್ನು ಮೂಡಿಸಿ ಆಡಳಿತ ನಡೆಸುವ ನೀತಿ’ಯನ್ನು ಕೊಟ್ಟು ಹೋಗಿದ್ದಾರೆ. ಕಾಂಗ್ರೆಸ್ಸಿಗರು ಅದರ ದುರುಪಯೋಗವನ್ನು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಇದೊಂದು ಚಿಂತನ ಮಂಥನ ಕಾರ್ಯಕ್ರಮ ಎಂದರು. ನೆಹರೂ 17 ವರ್ಷ, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಸೇರಿ ಕಾಂಗ್ರೆಸ್ ಪಕ್ಷವು 55- 60 ವರ್ಷ ದೇಶವನ್ನಾಳಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನೆಹರೂ ಕುಟುಂಬದ ಹಾಗೂ ಕಾಂಗ್ರೆಸ್‍ನ ರಬ್ಬರ್ ಸ್ಟಾಂಪ್ ಆಗಿದ್ದರು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ
Date:






