ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತವಾಗಿದೆ. ಕಾಂಗ್ರೆಸ್‍ನವರ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ರಾಜ್ಯದ ಬಡವರು, ದೀನ-ದಲಿತರ ಪರವಾಗಿ ನಮ್ಮ ಪಕ್ಷವಿದೆ ಎಂದು ಕರೆ ನೀಡಿದರು. ಜೆಡಿಎಸ್, ಕಾಂಗ್ರೆಸ್ ಸರ್ಕಾರ ಕಚ್ಚಾಟದಲ್ಲಿಯೇ ಕಾಲ ಕಳೆದು ರಾಜ್ಯದ ಜನರನ್ನು ವಂಚಿಸಿತ್ತು.
ಹಾಗಗಿ ಅವರು ಏನೆ ಪ್ಲಾನ್ ಮಾಡಿದರು ಗೆಲ್ಲಲು ಅಗಲ್ಲ ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಪೂರ್ಣಾವಧಿ ಆಡಳಿತ ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶ್ರಿರಾಮಲು ಅವರು ಹೇಳಿದ್ದಾರೆ .ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಶ್ರೀರಾಮಲು ಸೋಲಿನ ಹತಾಶೆಯಿಂದ ಕಾಂಗ್ರೆಸ್‍ನವರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.