No menu items!
12.3 C
Munich
Monday, October 5, 2026

ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ: ಆರ್ ಅಶೋಕ್

Must read

ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ: ಆರ್ ಅಶೋಕ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು ದಿನಗಳ ಕಾಲ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.

ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.

- Advertisement -spot_img

More articles

- Advertisement -spot_img

Latest article