ಕಾಂಗ್ರೆಸ್ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ಸಿಗರ ರಕ್ತದಲ್ಲೇ ಸರ್ವಾಧಿಕಾರ ಇದೆ. ಇಂದಿರಾಗಾಂಧಿ ಅವರು ಈ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದೆ. ಆ ಕರಾಳದಿನವನ್ನು ಕರ್ನಾಟಕದಲ್ಲಿ ಸುವರ್ಣ ಮಹೋತ್ಸವವನ್ನು ಕಾಂಗ್ರೆಸ್ ಆಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.ಈ ಬಗ್ಗೆ ಬೆಂಗಳೂರಿನ ಜೆಪಿ ನಗರದ ನಿವಾಸದ ಬಳಿ ಮಾತನಾಡಿದ ಅವರು, ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಕುರಿತು ತೀವ್ರವಾಗಿ ಖಂಡಿಸಿದರು.ವಿಧಾನಸೌಧ ನಮ್ಮ ರಾಜ್ಯದ ಶಕ್ತಿ ಸೌಧ, ಇಂಥ ಶಕ್ತಿ ಸೌಧದಲ್ಲಿ ಎಮರ್ಜೆನ್ಸಿ 2.0ತಂದಿದ್ದಾರೆ. ಇಂಥ ಸರ್ವಾಧಿಕಾರದ ಮನಸ್ಥಿತಿ ಕಾಂಗ್ರೆಸ್ ಪಕ್ಷದ DNA ಬದಲಾಗಿಲ್ಲ, ಅವರ ರಕ್ತದಲ್ಲೇ ಬಂದಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.ಸಂವಿಧಾನದ ಅಡಿಯಲ್ಲಿ ಮಾಧ್ಯಮದವರ ಅಭಿಪ್ರಾಯವನ್ನು ವ್ಯಕ್ತಿಪಡಿಸುವುದಕ್ಕೆ ಎಲ್ಲರಿಗೂ ಹಕ್ಕಿದೆ.ಭದ್ರತೆ ಮತ್ತು ತಾಂತ್ರಿಕ ಕಾರಣದಿಂದ ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧಿಸಿರುವುದು ಅವರು ಹೇಡಿತನ. ಇದರ ಉದ್ದೇಶ ವಿಧಾನಸೌಧದಲ್ಲಿ ಸರ್ಕಾರದ ಜನಪ್ರತಿನಿದಿಗಳು ನಡೆಸುತ್ತಿರುವ ಅವ್ಯವಹಾರ, ಭ್ರಷ್ಟಾಚಾರವನ್ನು ಮುಚ್ಚಕುವುದಕ್ಕೆ ಮಾಧ್ಯಮಗಳ ನಿರ್ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪತ್ರಕರ್ತರ ಪ್ರತಿಭಟನೆ ವಿಚಾರಕ್ಕೆ ಮಾತನಾಡಿದ ಅವರು. ನಿಮ್ಮ ಹೋರಾಟಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ. ಇದು ಮಾಧ್ಯಮಗಳ ಹೋರಾಟವಲ್ಲ, ಏಳುಕೋಟಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯದ ಹೋರಾಟ. ನಿಮ್ಮ ಜತೆ ನಾವಿದ್ದೇವೆ ಎಂದು ಅವರು ಹೇಳಿದರು.






