ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ: ಸಂಸದ ಯದುವೀರ್ ಕಿಡಿ
ಮೈಸೂರು: ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮ, ಜಾತಿ, ಸಮುದಾಯಕ್ಕೆ ಗೌರವ ನೀಡುವುದು ನಮ್ಮ ಪಕ್ಷದ ಬದ್ಧತೆಯಾಗಿದೆ.
ಆದರೆ ಅಲ್ಪಸಂಖ್ಯಾತ ಸಮುದಾಯದ ಓಲೈಕೆಯಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಕಾಣಿಸುತ್ತಲೇ ಇಲ್ಲ. ತುಷ್ಟೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಯಾರೊಬ್ಬರೂ ಕೂಡ ಈ ಘಟನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಇದೆ. ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಎಂದು ಬೀದರ್ ಮತ್ತು ಶಿವಮೊಗ್ಗದ ತೀರ್ಥಹಳ್ಳಿಯ ಘಟನೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ಆರೋಪ ಮಾಡಿದ್ದಾರೆ.