ಕಾಂಗ್ರೆಸ್ ಸೇರ್ಪಡೆಯಾಗಲಿರುವ ಸಿಪಿ ಯೋಗೇಶ್ವರ್!
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಕರೆ ತರುವ ಮೂಲಕ ದಳಪತಿಗಳಿಗೆ ಚೆಕ್ಮೇಟ್ ಇಡಲು ಡಿಕೆ ಬ್ರದರ್ಸ್ ರಣತಂತ್ರ ರೂಪಿಸಿದ್ದು, ಸಿಎಂ ಸಿದ್ದರಾಮಯ್ಯ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಿಗ್ಗೆ 11.30ಕ್ಕೆ ಕೆಪಿಸಿಸಿ ಕಛೇರಿಯಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಅದರಂತೆ ಸಿ.ಪಿ. ಯೋಗೀಶ್ವರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದಕ್ಕೂ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.