ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ (79) ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೇಟಿ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ ಮೇಟಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ಚುನಾವಣೆಯಲ್ಲಿ ಅವರು ಸೋತಿದ್ದರು.
ಹೆಚ್.ವೈ. ಮೇಟಿ 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಖಾತೆ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಆ ಸಮಯದಲ್ಲಿ ಲೈಂಗಿಕ ಹಗರಣದ ವಿವಾದ ಎದುರಿಸಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.






