ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಭೀಕರವಾಗಿ ರೈಲು ಅಪಘಾತವಾಗಿದೆ. ಐವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಸ್ಸಾಂನ ಸಿಲ್ಚಾರ್‌ನಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಾಂಚನಜುಂಗಾ ಎಕ್ಸ್ʼಪ್ರೆಸ್ʼಗೆ ಗೂಡ್ಸ್ ರೈಲಿಗೆ ಡಿಕ್ಕಿ: 5 ಜನರ ಸಾವು !
Date: