ಕಾಟೇರ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ. ಈಗ ಈ ಸಿನಿಮಾದ ಟ್ರೈಲರ್ ರಿಲೀಸ್ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದ್ದು ಕೌಂಟ್ ಡೌನ್ ಶುರುವಾಗಿದೆ.
ಇಂದು ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯೋ ಕಾರ್ಯಕ್ರಮದಲ್ಲಿ ಟ್ರೈಲರ್ ರಿಲೀಸ್ ಆಗಲಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರೋ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದಲ್ಲಿ ದರ್ಶನ್ , ಆರಾಧನ, ಚಿಕ್ಕಣ್ಣ, ಶೃತಿ, ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಕಲಾವಿದರ ದಂಡೆ ಭಾಗಿಯಾಗಲಿದೆ.
ಇನ್ನೊಂದು ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಕೂಡ ಕಾಟೇರ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗೋ ಸಾಧ್ಯತೆ ಇದೆಯಂದು ಹೇಳಲಾಗುತ್ತಿದೆ.