ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

Date:

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಇಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾಡಾನೆಯನ್ನು ಮರಳಿ ಕಾಡಿಗೆ ತೆರಳಿಸಲು ಅಥವಾ ಅಗತ್ಯವಿದ್ದರೆ ಆನೆಯನ್ನು ಸೆರೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಜೊತೆಗೆ, ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಭಾಯಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ. ಕಳೆದುಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ವನ್ಯಜೀವಿ ದಾಳಿಯಿಂದ ಆಕಸ್ಮಿಕವಾಗಿ ಮೃತಪಟ್ಟವರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ಒದಗಿಸುವಂತೆ ಸಚಿವರು ತಿಳಿಸಿದ್ದಾರೆ.

ಇದೇ ರೀತಿಯ ಘಟನೆಗಳು ಮರುಕಳಿಸದಂತೆ, ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಆನೆಗಳ ಸಂಚಾರದ ಕುರಿತು ಸ್ಥಳೀಯರಿಗೆ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನಿಸುವುದು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಈಶ್ವರ ಖಂಡ್ರೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...