ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ದರ್ಶನ್ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. . ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಅವರನ್ನೀಗ ಅರೆಸ್ಟ್ ಮಾಡಿ, ತನಿಖೆ ಮುಂದುವರಿಸಿದ್ದಾರೆ. ತನಿಖೆಯಲ್ಲಿ ಏನು ವಿಚಾರ ಬರಲಿದೆಯೋ ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಆ ಹುಡುಗ ರೇಣುಕಾಸ್ವಾಮಿ, ದರ್ಶನ್ ಗೆಳತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೇನೋ ಪೋಸ್ಟ್ ಮಾಡಿದ್ದ. ಅದರ ಬಗ್ಗೆ ಅವರು ದೂರು ಕೊಡಬಹುದಿತ್ತು. ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು. ಆದರೆ ಅವರನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನು ರೀತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.
ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು – ಜಿ.ಪರಮೇಶ್ವರ್
Date: