ಕಾನೂನನ್ನ ದುರುದ್ದೇಶ ಇಟ್ಟುಕೊಂಡು ಮಾಡಿದ್ರೆ ಹೀಗೇ ಆಗೋದು: ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ಕಾನೂನನ್ನ ದುರುದ್ದೇಶ ಇಟ್ಟುಕೊಂಡು ಮಾಡಿದ್ರೆ ಹೀಗೇ ಆಗೋದು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಏನೋ ಒಂದು ಉದ್ದೇಶದಿಂದ ಧ್ವನಿವರ್ಧಕ ಬಂದ್ ಮಾಡಿ ಬಿಂಬಿಸಿದ್ರು. ತಿಂಗಳುಗಟ್ಟಲೇ ನಾಟಕ ಆಯ್ತು, ಜನರಲ್ಲಿ ಗೊಂದಲ ಮೂಡಿಸಿದ್ರು. ಈಗ ಅಧಿಕಾರಿಗಳು ಬಂದು ಯಕ್ಷಗಾನವನ್ನೇ ನಿಲ್ಲಿಸ್ತಾ ಇದ್ದಾರೆ. ಯಾಕೆ ನಿಲ್ಲಿಸ್ತಾರೆ ಅಂದರೆ,
ಇವರು ಮಾಡಿದ ಕಾನೂನಿನ ಕಾರಣಕ್ಕಾಗಿ ನಿಲ್ಲಿಸ್ತಾರೆ. ಕಾನೂನನ್ನ ದುರುದ್ದೇಶ ಇಟ್ಟುಕೊಂಡು ಮಾಡಿದ್ರೆ ಹೀಗೇ ಆಗೋದು. ಒಬ್ಬೊಬ್ಬ ಅಧಿಕಾರಿ ಬಂದಾಗ ಅವರಿಗೆ ಇಷ್ಟ ಬಂದ ಹಾಗೆ ಕಾನೂನು ಪಾಲಿಸ್ತಾರೆ. ಹಾಗಾಗಿ ಸಮಸ್ಯೆಯಿಂದ ಮತ್ತೆ ಮತ್ತೆ ಸಮಸ್ಯೆ ಸೃಷ್ಟಿಸಬಾರದು ಎಂದು ತಿಳಿಸಿದರು.
ಸಂವಿಧಾನಕ್ಕೆ ಅನುಗುಣವಾಗಿ ಇರದ ಈ ತಿದ್ದುಪಡಿ ಸರಿಯಲ್ಲ. ಸ್ವಾಭಾವಿಕವಾಗಿ ಇದರ ವಿರುದ್ಧ ಜನರು ಪ್ರತಿಭಟನೆ ಮಾಡ್ತಾ ಇದ್ದಾರೆ. ಪ್ರತಿಭಟನೆ ಪ್ರಜಾಪ್ರಭುತ್ವದ ಒಂದು ಸೌಂದರ್ಯ. ಅದು ಕಾನೂನು ರೀತಿಯಲ್ಲಿ ಇರಬೇಕು.
ಸಂವಿಧಾನಾತ್ಮಕ ರೀತಿಯಲ್ಲೇ ಹೋರಾಟ ಮಾಡಬೇಕು. ಉಲೇಮಾಗಳು ಗೌರವಪೂರ್ವಕವಾಗಿ ಪ್ರತಿಭಟನೆ ಮಾಡ್ತಾ ಇದ್ದಾರೆ. ಎಲ್ಲಾ ಯುವಕರು ಉಲೇಮಾಗಳ ಹಾಗೂ ಹಿರಿಯರ ಸಲಹೆ, ಮಾರ್ಗದರ್ಶನ ಪಡೆಯಿರಿ ಎಂದು ಹೇಳಿದರು.