ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರಾವಳಿ ತೀರದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು ಜನರು ತೀವ್ರ ಆಕ್ರೋಶ ಕ್ಕೀಡಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾದ ಪರಿಸ್ಥಿತಿ ಕೂಡ ಬಂದಿದ್ದು ಈ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಯುಟಿ ಖಾದರ್ ಅವರ ಹೇಳಿಕೆಯಿಂದಲೇ ಅವರ ಭಾಷಣದಿಂದಲೇ ಜನರು ಈ ರೀತಿ ಮಾಡಿದ್ದಾರೆ ಎಂಬ ಮಾತನಾಡಿದ್ರೂ ಇದಕ್ಕೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಮನವಿ ಮಾಡುತ್ತೇನೆ. ಮತ್ತೆ ಮತ್ತೆ ಅದೇ ವಿಚಾರವನ್ನು ಹೇಳಬೇಡಿ.
ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದ್ದು ಬೇರೆಯವರ ತಲೆಗೆ ಕಟ್ಟುವುದು ಬೇಡ. ಅದು ಶೋಭೆ ತರುವ ಕೆಲಸವಲ್ಲ ಎಂದು ಹೇಳಿದ್ದಾರೆ.ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.