No menu items!
10.3 C
Munich
Saturday, September 12, 2026

ಕಾನ್ಸ್‌ಟೇಬಲ್ ಮತ್ತು ಹೋಂಗಾರ್ಡ್ ಲವ್ ಕೇಸ್: ಚಿಕಿತ್ಸೆ ಫಲಕಾರಿಯಾಗದೆ ಕಾನ್ಸ್‌ಟೇಬಲ್ ಸಾವು

Must read

ಬೆಂಗಳೂರು: ಕಾನ್ಸ್ಟೇಬಲ್ ಮೇಲೆ ಹೋಮ್ಗಾರ್ಡ್ ಆಗಿರುವ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕಾನ್ಸ್ಟೇಬಲ್ ಸಂಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಪುಟ್ಟೇನಹಳ್ಳಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮನೆಗೆ ಬಂದು ಜಗಳ ಮಾಡಿಕೊಂಡ ಸಂಜಯ್ ಮೇಲೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎಂದು ಆರೋಪಿಸಲಾಗಿದೆ.
ಸಂಜಯ್ ಬಂಕ್ಗೆ ತೆರಳಿ ಒಂದು ಲೀಟರ್ ಪೆಟ್ರೋಲ್ ತಂದಿದ್ದನು. ಪೆಟ್ರೋಲ್ ಹಾಕ್ತಿಯ ಹಾಕು ನೋಡೋಣ ಎಂದಿದ್ದನು. ಈ ವೇಳೆ ಸಂಜಯ್ ಹೊಟ್ಟೆ ಬೆನ್ನಿನ‌ ಮೇಲೆ ಪೆಟ್ರೋಲ್ ಸುರಿದಿದ್ದು, ನಂತರ ನೀರು ಹಾಕಿ ಬೆಂಕಿ ಆರಿಸಿ, ಸಂಜಯ್ನನ್ನ ತನ್ನದೇ ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಳು. ಪೊಲೀಸರ ತನಿಖೆ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದು ರಾಣಿ ಹೇಳಿಕೆ ನೀಡಿದ್ದಾಳೆ.


ಕಾನ್ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಸಂಜಯ್ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ.
ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article