No menu items!
30.9 C
Munich
Thursday, June 18, 2026

ಕಾಪು ಹೆಸರಾಂತ ಸಮಾಜಸೇವಕ ದಂಪತಿ ಆತ್ಮಹತ್ಯೆಗೆ ಶರಣು

Must read

ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ಜೊತೆಯಾಗಿ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು.
ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ಅವರು ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಸಾವಿರಾರು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ.

- Advertisement -spot_img

More articles

- Advertisement -spot_img

Latest article