ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ

By
1 Min Read

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ ಆಗಿದೆ. 18 ವರ್ಷದ ಸುಹನಾ ಬಾನು ಸಾವನ್ನಪ್ಪಿದ ಯುವತಿಯಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ‌ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

Share This Article