ಕಾರವಾರ ಶಾಸಕ ಸತೀಶ್ ಸೈಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್

Date:

ಕಾರವಾರ ಶಾಸಕ ಸತೀಶ್ ಸೈಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್

ಕಾರವಾರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.

ಕಳೆದ ಆಗಸ್ಟ್ 13 ಮತ್ತು 14ರಂದು ಇಡಿ ಅಧಿಕಾರಿಗಳು ಶಾಸಕರ ನಿವಾಸ ಹಾಗೂ ಕಚೇರಿಗಳ ಮೇಲೆ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಹಾಗೂ 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಂಡಿದ್ದರು. ಜೊತೆಗೆ ಅಪಾರ ದಾಖಲೆಗಳನ್ನೂ ಜಪ್ತಿ ಮಾಡಲಾಗಿತ್ತು.

ಇದಕ್ಕೂ ಮೊದಲು ಸತೀಶ್ ಸೈಲ್ ಅಕ್ರಮ ಅದಿರು (Iron Ore) ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. ಇದೀಗ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತೆ ಬಂಧಿಸಲಾಗಿದೆ.

ಬಂಧನದ ನಂತರ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಬಳಿಕ ಅವರನ್ನು ನ್ಯಾಯಮೂರ್ತಿ ಗಜಾನನ ಭಟ್ ಅವರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...