ಕಾರು ಚಾಲಕ ಕಾರ್ತಿಕ್ ಎಲ್ಲಿದ್ದಾರೆ ಎಂಬುದು SITಯವರಿಗೆ ಮಾತ್ರ ಗೊತ್ತಿರುತ್ತೆ !

Date:

ಬೆಂಗಳೂರು: ಎಸ್ಐಟಿ ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಅವರು ಏನು ಮಾಡಲಿದ್ದಾರೆ ಎಂದು ನಾನು ಹೇಳಲು ಆಗಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪ್ರಕರಣ ಸಂಬಂಧ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂಬ ಹೆಚ್ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಅವರಿಗೆ ಬೇಸರವಾಗಿದೆ. ಹಾಗಾಗಿ ಹಾಗೆ ಹೇಳುತ್ತಾರೆ.
ಆದರೆ ಎಸ್ಐಟಿ ಕಾನೂನಿನಂತೆ ಕ್ರಮ ಕೈಗೊಂಡಿದೆ. ಎಸ್ಐಟಿಯವರು ಒಂದು ವೇಳೆ ಕಾನೂನು ವಿರುದ್ಧವಾಗಿ ಹೋದರೆ ಅವರ ಮೇಲೂ ಆಪಾದನೆ ಬರುತ್ತದೆ. ಹಾಗಾಗಿ ಅವರು ಎಲ್ಲಾ ಎಚ್ಚರಿಕೆ ವಹಿಸುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು ಎಂದು ನಾವೂ ಸೂಚನೆ ನೀಡಿದ್ದೇವೆ ಎಂದರು.
ಎಸ್ಐಟಿ ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಅವರು ಏನು ಮಾಡಲಿದ್ದಾರೆ ಎಂದು ನಾನು ಹೇಳಲು ಆಗಲ್ಲ. ಸಿಡಿ ಬಿಡುಗಡೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ಎಸ್ಐಟಿಯವರೇ ಪರಿಶೀಲನೆ ನಡೆಸುತ್ತಾರೆ ಎಂದರು. ಕಾರು ಚಾಲಕ ಕಾರ್ತಿಕ್ ಎಲ್ಲಿದ್ದಾರೆ ಎಂಬುದು ಎಸ್ಐಟಿಯವರಿಗೆ ಮಾತ್ರ ಗೊತ್ತಿರುತ್ತೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...