ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು
ಶಿವಮೊಗ್ಗ: ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುರುಘಾಮಠ ಹತ್ತಿರ ನಡೆದಿದೆ. ಅಕ್ಷಯ್(28) ಹಾಗೂ ಶರಣ್ (26) ಸಾವನ್ನಪ್ಪಿದ ದುರ್ಧೈವಿಗಳಾಗಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತ ಪಟ್ಟಿದ್ದಾರೆ. ಮೃತರು ದೊಡ್ಡಬಳ್ಳಾಪುರದಿಂದ ಹೊನ್ನಾವರಕ್ಕೆ ಹೊರಟಿದ್ದರು. ಸ್ಥಳಕ್ಕೆ ಆನಂದಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.