ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ಲಭ್ಯ

admin
1 Min Read

ಜುಲೈ ಮೊದಲ ವಾರದಿಂದ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಕಾಲೇಜುಗಳ ಕ್ಯಾಂಪಸ್‌ಗಳಲ್ಲೇ ಲಸಿಕೆ ನೀಡಲು ತೀರ್ಮಾನಿಸಲಾಗಿದೆ.
ಕೋವಿಡ್ ನಿರ್ವಹಣೆ ಕುರಿತ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಮೊದಲು ಉನ್ನತ ಶಿಕ್ಷಣ ವ್ಯಾಸಂಗ ಕೋರ್ಸ್‌ಗಳನ್ನು ಆರಂಭಿಸಲು ಸಲಹೆ ನೀಡಿದೆ.


ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯನ್ನು ಕ್ಯಾಂಪಸ್ ಆವರಣದಲ್ಲಿಯೇ ನೀಡಲು ಮುಂದಾಗಿದೆ.
ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಈ ಕುರಿತು ಮಾತನಾಡಿದ್ದಾರೆ, “ನಾವು ಲಸಿಕಾ ಅಭಿಯಾನವನ್ನು ನಡೆಸಲು ತೀರ್ಮಾನಿಸಿದ್ದೇವೆ. ಜುಲೈ ಮೊದಲ ವಾರದಲ್ಲಿ ಇದು ಆರಂಭವಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸೇರಿಸಿ ಸುಮಾರು 20 ಜನರಿಗೆ ಲಸಿಕೆ ನೀಡಬೇಕು ಅಂದು ಅಂದಾಜಿಸಲಾಗಿದೆ. ಕೋವಿಡ್‌ ವ್ಯಾಕ್ಸಿನ್ ಲಭ್ಯತೆ ನೋಡಿಕೊಂಡು ಅಭಿಯಾನ ಆರಂಭಿಸಲಾಗುತ್ತದೆ.

ಎಲ್ಲರಿಗೂ ಮೊದಲ ಡೋಸ್ ಲಸಿಕೆ ನೀಡಿದ ಬಳಿಕ ತರಗತಿಗಳನ್ನು ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಈಗಾಗಲೇ ಕೆಲವು ಶಿಕ್ಷಣ ಸಂಸ್ಥೆಗಳು ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ನಡೆಸುತ್ತಿವೆ.

Share This Article
Leave a Comment