ಕಾಲ್ತುಳಿತ ದುರಂತ: ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್.!
ಬೆಂಗಳೂರು: ಕಾಲ್ತುಳಿತದಲ್ಲಿ ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ರಾಜ್ಯ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ವಿಪಕ್ಷಗಳು ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಕೂಡ ನಿಗಿನಿಗಿ ಎನ್ನುತ್ತಿದೆ. ಇದೇ ದುರ್ಘಟನೇಗೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಒಂದಲ್ಲ, ಎರಡಲ್ಲ ಬರೋಬ್ಬರಿ 11 ಜನ ಜೀವ ಪಡೆದ ಘೋರ ದುರಂತ, ಇಡೀ ದೇಶವನ್ನೇ ಕಂಗೆಡಿಸಿದೆ. ರಾಷ್ಟೀಯ ಮಟ್ಟದಲ್ಲೂ ಕರ್ನಾಟಕ ಸರಕಾರಕ್ಕೆ ಛೀಮಾರಿ ಜೊತೆ ಮುಜುಗರಕ್ಕೂ ಕಾರಣವಾಗಿತ್ತು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿತ್ತು.
ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.