No menu items!
11 C
Munich
Saturday, October 10, 2026

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ !

Must read

ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದರು. ಜೆಪಿ‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ. ಮೇಕೆದಾಟು ಕುಡಿಯುವ ನೀರಿನ‌ ಯೋಜನೆ. ಹೀಗಾಗಿ ಕೂಡಲೇ ಮೇಕೆದಾಟು ಯೋಜನೆಗೆ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.
ಇನ್ನೂ ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ನೀರಾವರಿ ಬೋರ್ಡ್‌ನ ತೀರ್ಪು ರಾಜ್ಯಕ್ಕೆ ಮರಣ ಶಾಸನ. ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಜಲ‌ ಸಂಪನ್ಮೂಲ ಸ್ಥಾಯಿ ಸಮಿತಿ ಸಭೆ ಇತ್ತು. ಆ ಸಭೆಯಲ್ಲಿ ಈ‌ ಎಲ್ಲಾ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article