No menu items!
14.3 C
Munich
Saturday, May 30, 2026

ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು: ಸಿಎಂ ಸಿದ್ದರಾಮಯ್ಯ

Must read

ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ.
ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ಇನ್ನೂ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು.

- Advertisement -spot_img

More articles

- Advertisement -spot_img

Latest article