ಕಾಶ್ಮೀರ ವಿಚಾರ ಎರಡು ದೇಶಗಳಿಗೆ ಬಿಟ್ಟಿದ್ದು, ಭಾರತ-ಪಾಕಿಸ್ತಾನ ಕುಳಿತು ಬಗೆಹರಿಸಿಕೊಳ್ಳಲಿ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಆದರೆ ಎರಡು ದೇಶಗಳ ನಡುವಿನ ವಿಚಾರಕ್ಕೆ ನಾವು ತಲೆ ಹಾಕುವುದಿಲ್ಲ ಅದನ್ನು ಅವರೇ ಬಗೆಹರಿಸಿಕೊಳ್ಳಲಿ ಎಂದಿದ್ದಾರೆ.
ಪಾಕಿಸ್ತಾನದ ಟಿವಿ ಚಾನೆಲ್ ಎಆರ್‌ವೈ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುಜಾಹಿದ್, ವಿವಾದಿತ ಪ್ರದೇಶದ ಬಗ್ಗೆ ಭಾರತವು ಸಕಾರಾತ್ಮಕ ಧೋರಣೆ ಹೊಂದಬೇಕಿದೆ ಎಂದು ಹೇಳಿದ್ದಾರೆ. ಈಗಿನ ಅಫ್ಘಾನಿಸ್ತಾನ ಆಡಳಿತವು ಪಾಕಿಸ್ತಾನವನ್ನು ತನ್ನ ಎರಡನೇ ಮನೆ ಎಂದು ಭಾವಿಸಿದೆ. ಹೀಗಾಗಿ ಆ ದೇಶದ ವಿರುದ್ಧದ ಚಟುವಟಿಕೆಗಳಿಗೆ ಅಫ್ಘಾನಿಸ್ತಾನದ ನೆಲದಲ್ಲಿ ಅವಕಾಶ ನೀಡುವುದಿಲ್ಲ ಎಂದು ಮುಜಾಹಿದ್ ಸಂದರ್ಶನದಲ್ಲಿ ಹೇಳಿರುವುದಾಗಿ ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.