ಬೆಂಗಳೂರು: ಮನೆ ಕೆಲಸದಾಕೆಯ ಕಿಡ್ನಾಪ್ ಮಾಡಿದ ಆರೋಪ ಕೇಸ್ʼಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದು, ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಾಗಿದೆ.
”ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಬಗ್ಗೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಬಂಧನ ಭೀತಿ ಇದೆ” ಎಂದು ಅರ್ಜಿಯಲ್ಲಿ ಭವಾನಿ ರೇವಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ಎಸ್ಐಟಿ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ವಿಚಾರಣೆಗೆ ಒಳಗಾದರೆ ಬಂಧಿಸುವ ಸಾಧ್ಯತೆಯಿದೆ. ಆದ್ದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕಿಡ್ನಾಪ್ ಆರೋಪ ಕೇಸ್: ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ಮೆಟ್ಟಿಲೇರಿದ ಭವಾನಿ
Date: