ಕಿತ್ತೂರು ಉತ್ಸವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ..!

tnit editors
1 Min Read

ಕಿತ್ತೂರು ಉತ್ಸವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ..!

ಬೆಂಗಳೂರು: ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ಅವರ ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದ ಘಟನೆ ವಿಧಾನಸೌಧದ ಮುಂಭಾಗ ನಡೆದಿದೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿಗಳು ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿಯನ್ನು ಆರಿಸಿದ್ದಾರೆ.
ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ನಲ್ಲಿ 200ನೇ ಕಿತ್ತೂರು ವಿಜಯೋತ್ಸವ ಆಚರಣೆ ಕಾರ್ಯಕ್ರಮಕ್ಕೆ ಇಂದು ಸಿಎಂ ಚಾಲನೆ ನೀಡಿದರು. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಜಾಗ ಬಿಡಲು ಸಿಎಂ ಮುಂದಾದರು.
ಈ ವೇಳೆ ಸಿಎಂ ದೀಪದ ಹತ್ತಿರ ಬಂದಾಗ ಎಡಕೈಗೆ ಬೆಂಕಿಯ ಕಿಡಿ ತಾಗಿದೆ. ಬಟ್ಟೆಗೆ ಆಕಸ್ಮಿಕವಾಗಿ ತಾಕಿದ ಕಿಡಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ಆರಿಸಿದ್ದಾರೆ.ಇನ್ನೂ ಈಗ ಸಿದ್ದರಾಮಯ್ಯ ಅವರಿಗೆ ಮುಡಾ ಸಂಕಷ್ಟ ಎದುರಾಗಿದೆ. ಇದರ ನಡುವೆ ಅವರಿಗೆ ಕೆಲವು ಅಪಶಕುನದ ಮುನ್ಸೂಚನೆ ಸಿಗ್ತಾ ಇದ್ಯಾ ಎನ್ನುವ ಅನುಮಾನ ಕಾಡಿದೆ.

Share This Article