ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

Date:

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿ, ನವೆಂಬರ್ 16: ಭೂತರಾಮನಹಟ್ಟಿ ಸಮೀಪದ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಅಸಹಜ ಸಾವುಗಳ ಸರಣಿ ಮುಂದುವರಿಯುತ್ತಿದ್ದು, ಮತ್ತೊಂದು ಮೃಗ ಇಂದು ಸಾವನ್ನಪ್ಪಿದೆ. ಇದರಿಂದ, ಕಳೆದ ಮೂರು ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಒಟ್ಟು ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ನವೆಂಬರ್ 13ರಂದು 8 ಕೃಷ್ಣಮೃಗಗಳು ಮೃತಪಟ್ಟಿದ್ದರೆ, ನಿನ್ನೆ ಒಂದೇ ದಿನದಲ್ಲಿ 20 ಸಾವುಗಳು ಸಂಭವಿಸಿದ್ದವು.

ಮೃತ ಮೃಗಗಳ ಬಗ್ಗೆ ಮಾತನಾಡಿದ ವೈದ್ಯ ಡಾ. ಚಂದ್ರಶೇಖರ್ ಅವರು, ಕಿಡ್ನಿ, ಹೃದಯ, ಲಿವರ್ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. “ಮಂಗಳವಾರದೊಳಗೆ ಸಾವಿನ ಕುರಿತು ಸ್ಪಷ್ಟ ವರದಿ ಬರಲಿದೆ. ಆ ವರದಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಸಲ್ಲಿಸುತ್ತೇವೆ,” ಎಂದು ಅವರು ತಿಳಿಸಿದ್ದಾರೆ.

ಕೃಷ್ಣಮೃಗಗಳಲ್ಲಿ ಗಳಲೆ ರೋಗ ಕಾಣಿಸಿಕೊಂಡಿರುವ ಶಂಕೆಯನ್ನು ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನೀಲ್ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ವೈದ್ಯಕೀಯ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೃಗಾಲಯದ ಪೂರ್ಣ ಪರಿಶೀಲನೆಯೂ ನಡೆದಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...