ರಾಯಚೂರಿನಲ್ಲಿ ನಡೆದ ವಿದ್ಯಾರ್ಥಿನಿ ಮಧು ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ರಾಜ್ಯದ ಮೂಲೆ ಮೂಲೆಯಿಂದಲೂ ಕೂಗು ಕೇಳಿಬರುತ್ತಿದೆ. ಅಲ್ಲದೆ #JusticeForMadhu ಎಂದು ಅಭಿಯಾನವನ್ನೇ ರಾಜ್ಯದಾದ್ಯಂತ ಶುರುಮಾಡಲಾಗಿದೆ.
ಇದಕ್ಕೆ ಇದೀಗ ದರ್ಶನ್ ಅವರು ಕೂಡ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಕೀಚಕರಿಗೆ ಕಠಿಣ ಶಿಕ್ಷೆ ನೀಡಿ ಮಧುಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಶಾಮೀಲಾದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮೂಲಕ ಮಧು ಸಾವಿಗೆ ಕಂಬನಿ ಮಿಡಿದಿದ್ದಾರೆ
ದರ್ಶನ್ ಹೇಳಿದ್ದಿಷ್ಟು..!?
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ತನಿಖೆ ಅತೀ ಶೀಘ್ರದಲ್ಲಿ ಸರಿಯಾಗಿ ನಡೆದು ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನು ಬದ್ಧವಾಗಿ ತಕ್ಕ ಶಾಸ್ತಿಯಾಗಬೇಕೆಂದು ಕೋರಿಕೊಳ್ಳುತ್ತಿದ್ದೇನೆ. ಈ ರೇಪ್ & ಮರ್ಡರ್ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು ಎಂದು ಬರೆದು #JusticeForMadhu ಎಂಬ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.