ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡ ನಂತರ ಬಿಜೆಪಿ ನಾಯಕರಿಗೆ ನಡುಕ ಆರಂಭವಾಗಿದೆ.
ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿದೊಡನೆ ಬಿಜೆಪಿ ನಾಯಕರಿಗೆ ಬಳ್ಳಾರಿ ಲೋಕಸಭಾ ಉಪ ಚುನಾವಣೆ ನೆನಪಾಗುತ್ತಿದ್ದು ಕಳೆದ ಎರಡು ದಿನಗಳಲ್ಲಿ ಡಿ ಕೆ ಶಿವಕುಮಾರ್ ನಡೆಸಿದ ಸರಣಿ ಸಭೆ ಮತ್ತು ಮತಬೇಟೆಯ ತಂತ್ರಗಳನ್ನು ನೋಡಿ ಬಿಜೆಪಿ ನಾಯಕರು ಕಂಗಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮೇ 19ರಂದು ನಡೆಯಲಿರುವ ಕುಂದಗೋಳ ಉಪ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯ ಎಸ್.ಐ.ಚಿಕ್ಕನಗೌಡ ವಿರುದ್ಧ ಕಣಕ್ಕಿಳಿದಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಉಪ ಚುನಾವಣೆ ಗೆಲ್ಲಲೇಬೇಕು ಎಂಬ ಪಣದೊಂದಿಗೆ ಡಿ.ಕೆ.ಶಿವಕುಮಾರ್‌ಗೆ ಉಸ್ತುವಾರಿ ನೀಡಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿಯನ್ನು ವಹಿಸಿಕೊಂಡ ನಂತರ ಡಿ.ಕೆ.ಶಿವಕುಮಾರ್ ಅವರು ಬುಧವಾರದಿಂದಲೆ ಕಾರ್ಯಪ್ರವೃತ್ತರಾಗಿದ್ದು ನಿನ್ನೆ ಹುಬ್ಬಳ್ಳಿಯ ಕಾಟನ್ ಕ್ಲಬ್ ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಸ್ಥಳೀಯ ಬಿಜೆಪಿ ನಾಯಕರ ಮೇಲೆ ಕಣ್ಣಿಡಲು ಹಾಗೂ ಚುನಾವಣೆಯಲ್ಲಿ ಗೆಲ್ಲಲು ಬೇಕಾದ ತಂತ್ರಗಳ ಬಗ್ಗೆ ಸೂಚನೆಗಳನ್ನು ನೀಡುವುದರ ಮೂಲಕ ಹಲವರನ್ನು ನೇಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಗೆಲ್ಲಲು ಬಿಜೆಪಿ ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದರೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ ಅಲ್ಲದೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ನಾಯಕರನ್ನು ಗುರುತಿಸಿ ಅವರಿಗೆ ಟಫ್ ಟಾಸ್ಕ್ ನೀಡುತ್ತಾರೆ ಎಂದು ತಿಳಿದುಬಂದಿದೆ.






