ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದೆ

Date:

ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 23, 2021ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಸಂಸ್ಥೆ ಹೆಸರು: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)
ಒಟ್ಟು ಹುದ್ದೆಗಳು: ವಿವಿಧ
ಹೆಸರು: ಸರ್ವೇಯರ್, ಸಹಾಯಕ ಸರ್ವೇಯರ್
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 23, 2021.

ವಿದ್ಯಾರ್ಹತೆ: ಅರ್ಜಿದಾರರು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಬಿ.ಇ ಹಾಗೂ ಬಿ.ಟೆಕ್ ಪದವಿ. ಸಿವಿಲ್ ಇಂಜಿನಿಯರಿಂಗ್, ಪದವಿ ನಂತರ 2 ವರ್ಷಗಳ ಅನುಭವ, ಅಥವಾ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿದ್ದರೆ ಆದ್ಯತೆ. ಇದಲ್ಲದೆ ಮಾನ್ಯತೆ ಪಡೆದ ತಾಂತ್ರಿಕೇತರ ವಿಶ್ವ ವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಜೊತೆಗೆ 7 ವರ್ಷಗಳ ಕಾರ್ಯ ಕ್ಷೇತ್ರಗಳ ಅನುಭವ ಹೊಂದಿದ್ದರೂ ಆದ್ಯತೆ ಸಿಗಲಿದೆ.

ಇದರ ಜೊತೆಗೆ ಗಣಿಗಾರಿಕೆ ಸರ್ವೇಯರ್ ಬಗ್ಗೆ ಜ್ಞಾನ, ಆಟೋ ಕ್ಯಾಡ್ ಬಗ್ಗೆ ತಿಳುವಳಿಕೆ, ಸ್ಥಳೀಯ ಭಾಷಾ ಜ್ಞಾನ ಇರುವವರಿಗೆ ಆದ್ಯತೆ.  ಸಂಬಳ ವಿವರ: 40,000 ರಿಂದ 50,000/-ರು ಪ್ರತಿ ತಿಂಗಳು.
ಸರ್ವೇಯರ್: 50,000ರು
ಸಹಾಯಕ ಸರ್ವೇಯರ್: 40, 000ರು

 

ವಯೋಮಿತಿ: ಗರಿಷ್ಠ ವಯಸ್ಸು 35 ವರ್ಷ(ಜೂನ್ 30, 2021ರಂತೆ)
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಎಸ್ ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಿನಾಯಿತಿ ಇರುತ್ತದೆ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ. ಆಯ್ಕೆಯಾದ ಅಭ್ಯರ್ಥಿಗಳು ಮೂರು ವರ್ಷಗಳ ಗುತ್ತಿಗೆ ಆಧಾರಿತ ನೇಮಕಾತಿಗೆ ಸಹಿ ಹಾಕಬೇಕಾಗುತ್ತದೆ.

ಪ್ರಮುಖ ದಿನಾಂಕ:
ವಾಕ್ ಇನ್ ಸಂದರ್ಶನ ದಿನಾಂಕ: 23/08/2021.
ಸಮಯ: ಬೆಳಗ್ಗೆ 9.30 ರಿಂದ 10.30 ರ ವೇಳೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಸಂದರ್ಶನಕ್ಕೆ ಆಗಮಿಸುವುದಕ್ಕೂ ಮುನ್ನ ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಹಾಜರಾಗತಕ್ಕದ್ದು.
ಹೋಟೆಲ್ ಪಿಬಿಎಸ್ ಗ್ರ್ಯಾಂಡ್,
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಎದುರು
ಪಟೇಲ್ ನಗರ
ಹೊಸಪೇಟೆ- 583201

 

 

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...