ಕುಮಾರಣ್ಣನಿಗೆ ಟೆನ್ಷನ್ ಕೊಡುತ್ತಿದ್ದಾರೆ ಮಂಡ್ಯದ ಮಹಿಳೆಯರು..!? ಯಾಕೆ ಗೊತ್ತಾ..?

Date:

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಗಳಲ್ಲಿ ಮಂಡ್ಯ ಫಲಿತಾಂಶ ಏನಾಗಬಹುದು ಎಂಬುದೇ ಎಲ್ಲರ ಕುತೂಹಲವಾಗಿತ್ತು, ಕೆಲವರು ನಿಖಿಲ್ ಕುಮಾರಸ್ವಾಮಿ ಪರ, ಮತ್ತೆ ಕೆಲವರು ಸುಮಲತಾ ಅಂಬರೀಶ್ ಪರ ಬ್ಯಾಟ್ ಬೀಸೋ ಮೂಲಕ ಗೆಲುವು ನಮ್ಮದೆ ಎಂದು ಇಬ್ಬರ ಅಭಿಮಾನಿಗಳು ಮತ್ತು ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಕೂಡಾ ಜೋರಾಗಿಯೆ ನಡೆದಿತ್ತು, ಹೀಗೆ ಇಡೀ ರಾಜ್ಯದ ಗಮನವನ್ನು ಸೆಳೆದಿದ್ದ ಮಂಡ್ಯ ಚುನಾವಣೆಯ ಸಮೀಕ್ಷೆ ಇದೀಗ ಕುಮಾರಸ್ವಾಮಿಯವರ ಕೈ ಸೇರಿತ್ತು ಇದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿ ಇದೀಗ ಅಧಿಕಾರಿಗಳಿಗೆ ಮತ್ತೊಂದು ಸುತ್ತಿನ ಸಮೀಕ್ಷೆಗೆ ಆದೇಶಿಸಿದ್ದಾರೆ ಎಂದು ತಿಳಿದುಬರುತ್ತಿದೆ.

ಎಲ್ಲಾ ಚುನಾವಣೆಯಲ್ಲೂ ಜಾತಿ ಆಧಾರದಲ್ಲಿ ಗೆಲುವಿನ ಲೆಕ್ಕಾಚಾರ ನಡೆಯುವ ಮಂಡ್ಯದ ಕಣದಲ್ಲಿ ಮೊದಲ ಬಾರಿಗೆ ಅಭಿವೃದ್ಧಿ ಹಾಗೂ ಸ್ವಾಭಿಮಾನದ ಹೆಸರಲ್ಲಿ ಚುನಾವಣೆ ನಡೆದಿತ್ತು ಹೀಗೆ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಒಂದು ಸುತ್ತಿನ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದರು.ಅದರಂತೆ ಸಮೀಕ್ಷೆ ನಡೆಸಿದ್ದ ಗುಪ್ತಚರ ಇಲಾಖೆಯ ಅಧಿಕಾರಿಗಳು ಸಹ ಕಡಿಮೆ ಅಂತರದಲ್ಲಿ ನಿಖಿಲ್ ಗೆಲ್ಲುತ್ತಾರೆ ಎಂದು ವರದಿ ನೀಡಿದ್ದರು.

ಆದರೆ ಇಧಿಗೆ ಅಷ್ಟಕ್ಕೆ ಸಮಾಧಾನವಾಗದ ಮುಖ್ಯಮಂತ್ರಿಗಳು ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ, ಮಂಡ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಈ ಬಾರಿ ಹೆಚ್ಚಾಗಿರುವುದು ಕುಮಾರಸ್ವಾಮಿಯವರ ಈ ತಲೆನೋವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ

 

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...