ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ
ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ನಿವಾಸಿ ಮಹದೇವು ಅವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಮೃತ ಮಹದೇವು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು.
ಈ ಘಟನೆಯಿಂದ ನನಗೆ ಹಾಗೂ ಕುಮಾರಣ್ಣ ಅವರಿಗೆ ತುಂಬ ಮನಸ್ಸಿಗೆ ನೋವಾಗಿದೆ. ಕುಮಾರಣ್ಣ ಸಿಎಂ ಆಗುವವರೆಗೂ ಚಪ್ಪಲಿ ಧರಿಸಲ್ಲ ಎಂದಿದ್ದರು. ಈಗ ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ ಹೋದ ಜೀವ ವಾಪಸ್ಸು ತರಲು ಸಾಧ್ಯವಿಲ್ಲ ಎಂದು ನಿಖಿಲ್ ಅವರು ಬೇಸರ ವ್ಯಕ್ತಪಡಿಸಿದರು.
ಅವರ ಕುಟುಂಬದ ಜೀವನೋಪಾಯಕ್ಕೆ ನೆರವು ನೀಡುತ್ತೇವೆ.ಆ ನೋವನ್ನ ಭರಿಸುವ ಶಕ್ತಿಯನ್ನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷರಾದ ಡಿ.ರಮೇಶ್ , ತಾಲ್ಲೂಕು ಅಧ್ಯಕ್ಷರಾದ ಚಿಕ್ಕ ತಿಮ್ಮೇಗೌಡ ಅವರು, ಮುಖಂಡರಾದ ಹನುಮಂತೇಗೌಡ ಅವರು, ಜತೆಯಲ್ಲಿದ್ದರು.






