ಕುಮಾರಣ್ಣ ರಾಜೀನಾಮೆ ಮತ್ತೊಮ್ಮೆ ಸಿದ್ದು ಮುಖ್ಯಮಂತ್ರಿ..!?

admin
1 Min Read

ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬರುತ್ತಿದೆ, ಬೆಂಗಳೂರಿನಲ್ಲಿ ಇಂದು ನಡೆದ ಸಚಿವರ ಅನೌಪಚಾರಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ?

ಈ ಕುರಿತು ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಪಕ್ಷಗಳು ಮುಂದಾಗಿವೆ.

ಆದರೆ, ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಬದಲಾವಣೆ ಮಾಡಲು ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒಪ್ಪಿದ್ದಾರೆ ಕಾಂಗ್ರೆಸ್‌ನಿಂದ ಯಾರೂ ಬೇಕಾದರೂ ಮುಖ್ಯಮಂತ್ರಿಯಾಗಲಿ ನಾವು ಬೆಂಬಲ ನೀಡುತ್ತೇವೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಇದರ ಜೊತೆಗೆ ಇಂದು ಬೆಳಗ್ಗೆ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಮತ್ತು ಜೆಡಿಎಸ್ ಶಾಸಕರ ಸಭೆಯನ್ನು ದೇವೇಗೌಡರು ನಡೆಸಿದರು ಈ ಸಂದರ್ಭದಲ್ಲಿ ಗುಡುಗಿದ ದೇವೇಗೌಡರು ಯಾವುದೇ ಮುಲಾಜಿಲ್ಲದೇ ಮೈತ್ರಿಯನ್ನು ಮುಂದುವರೆಸಬೇಕೆ?, ಬೇಡವೇ? ಎಂದು ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.

Share This Article
Leave a Comment