ಕುಮಾರಸ್ವಾಮಿ , ಡಿಕೆಶಿ ಸೇರಿ ಹಲವು ನಾಯಕರು ಉಳಿದಿದ್ದ ಹೋಟೆಲ್ ರೂಮ್ ಮೇಲೆ ಐಟಿ ರೇಡ್!?

Date:

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ ಸೇರಿದಂತೆ ಸಾಕಷ್ಟು ಜಾಗಗಳಲ್ಲಿ ತಪಾಸಣೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದರು. ಕೆಲವು ಕಡೆ ಹಣ, ಆಸ್ತಿ ಸಿಗದಿದ್ದರೂ ಕೆಲವು ಕಡೆ ಒಳ್ಳೆ ಕುಳಗಳೇ ಬಲೆಗೆ ಬಿದ್ದಿದ್ದವು. ಆದರೆ ಈ ಬಾರಿ ತೆರಿಗೆ ಅಧಿಕಾರಿಗಳು ಏನೂ ಸಿಗದೇ ಬರಿಗೈಲಿ ವಾಪಸ್ ಹೋಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಂಗಿರುವ ಗೋಕುಲ ರಸ್ತೆಯ ಡಿನಿಸನ್ಸ್ ಹೊಟೇಲ್ ಹಾಗೂ ಸಚಿವ ಡಿಕೆ ಶಿವಕುಮಾರ್ ಅವರು ತಂಗಿರುವ ಕಾಟನ್ ಕೌಂಟಿ ಕ್ಲಬ್ ಕೊಠಡಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ನು ಸಚಿವ ಜಮೀರ್ ಅಹ್ಮದ್ ಖಾನ್, ಆರ್.ವಿ. ದೇಶಪಾಂಡೆ, ಎಂಎಲ್‌ಸಿ ನಾಸೀರ್ ಅಹ್ಮದ್, ಸಂತೋಷ್ ಲಾಡ್, ಎಮ್.ಟಿ.ಬಿ ನಾಗರಾಜ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವಾಸ್ತವ್ಯ ಹೂಡಿರುವ ಕೊಠಡಿಗಳನ್ನೂ ತಲಾಶ್ ನಡೆಸಿದ್ದಾರೆ. ಹೊಟೇಲ್ ದಾಖಲೆಗಳನ್ನು ವಶಕ್ಕೆ ಪಡೆದರು. ಗೋವಾ ಮತ್ತು ಬೆಳಗಾವಿ ಭಾಗದ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ವಾರ್ಡ್‌ರೋಬ್, ಟೇಬಲ್, ಕಾಟ್‌ಗಳನ್ನೂ ಬಿಡದೆ ಪರಿಶೀಲನೆ ಮಾಡಿದ್ದಾರೆ. ಈ ದಾಳಿಯಲ್ಲಿ ಅಧಿಕಾರಿಗಳ ಕೈಗೆ ಏನಾದ್ರು ಸಿಕ್ಕಿದ್ಯಾ ಅನ್ನೋ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಒಟ್ಟಾರೆ, ಲೋಕಸಭೆ ಚುನಾವಣೆ ವೇಳೆ ಶುರುವಾದ ಐಟಿ ದಾಳಿ ಮಿನಿ ಸಮರದಲ್ಲೂ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...