ಹೈ ವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಡೀಲ್ ಮಾಡಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿ ಮಾತನಾಡಿದ ಅವರು, ಜೆಡಿಎಸ್ 112 ಸ್ಥಾನಗಳನ್ನು ಪಡೆದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿಲ್ಲ. ಅವರು ಎರಡು ಸಲವೂ ಡೀಲ್, ಒಳ ಒಪ್ಪಂದದ ಮೂಲಕವೇ ಮುಖ್ಯಮಂತ್ರಿ ಹುದ್ದೆಯನ್ನು ಪಡೆದುಕೊಂಡಿದ್ದಾರೆ.
ಹಾಗಾಗಿ ಮುಖ್ಯಮಂತ್ರಿ ಸ್ಥಾನದ ಮಹತ್ವವೇ ಅವರಿಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.