ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕುರುಬ ಸಮುದಾಯದ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಸುಖಾಂತ್ಯ ಹಾಡಿದ್ದಾರೆ. ಈ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವುದು ಜೊತೆಗೆ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಹುದೆಂಬ ಭೀತಿಯಿಂದ ಖುದ್ದು ಸಿಎಂ ಕುರುಬ ಸಮುದಾಯದ ಕ್ಷಮೆ ಕೇಳಿ ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.
ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಒಂದು ವೇಳೆ ಆತುರದಲ್ಲಿ ಏನಾದರೂ ಆ ಸಮುದಾಯದ ಬಗ್ಗೆ ತಪ್ಪಾಗಿ ಮಾತನಾಡಿದ್ದರೆ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೇಳಿ ರಾಜಕೀಯ ವಲಯದಲ್ಲಿ ಆಗುತ್ತಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಇದರಿಂದ ಕುರುಬ ಸಮುದಾಯಕ್ಕೆ ಯಾವುದೇ ಗೊಂದಲವಿಲ್ಲದೆ ಆ ವಿಚಾರವನ್ನು ಅಲ್ಲಿಗೆ ಅಂತ್ಯಹಾಡಿದ್ದಾರೆ.