ನವದೆಹಲಿ: ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.
ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ: ನಿರ್ಮಲಾ ಸೀತಾರಾಮನ್
Date: