ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಚಿವರ ಮನೆಯಲ್ಲೇ ಐವರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಕೃಷಿ ಸಚಿವ ಬಿಸಿ ಪಾಟೀಲ್ ಅವರ ಮನೆಯಲ್ಲಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಸ್ವತಃ ಬಿ.ಸಿ.ಪಾಟೀಲ್ ಅವರೇ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ಸಿ.ಪಾಟೀಲ್, ನನ್ನ ಶ್ರೀಮತಿ, ಅಳಿಯ, ಹಿರೇಕೆರೂರಿನ ನಿವಾಸದ ಸಿಬ್ಬಂದಿ ಸೇರಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣ ಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಸಿ ಪಾಟೀಲ್ ಟ್ಟೀಟ್ ಮಾಡಿದ್ದಾರೆ.
ಬೆಂಗಳೂರು ಪೊಲೀಸ್ ಇಲಾಖೆ ಹೆಸ್ರನ್ನು ಬಹು ಎತ್ತರಕ್ಕೆ ಕೊಂಡ್ಹೋಗಿ : ಭಾಸ್ಕರ್ ರಾವ್ ಪ್ರೀತಿಯ ನುಡಿ …