ಚಿತ್ರ ನಟರಾಗಿರುವ ನಿಖಿಲ್ ಕುಮಾರ್ ರಾಜಕೀಯದಲ್ಲಿ ಯಶಸ್ಸು ಕಾಣಲಿಲ್ಲವಾದ್ದರಿಂದ ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆ. ನಾನು ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರ್ ಪರಾಭವಗೊಂಡ ಹಿನ್ನೆಲೆಯಲ್ಲಿ ಅವರಿಗೆ ಕೆಆರ್ ಪೇಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವ ಸಾಧ್ಯತೆ ಇದೆ. ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸುವ ಉದ್ದೇಶದಿಂದ ಮಾಜಿ ಸಿಎಂ ಕುಮಾರಸ್ವಾಮಿ ಕೆಆರ್ ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ.